ಬೆಂಗಳೂರು: ನೇತಾ, ನೀತಿ ಎರಡೂ ಇಲ್ಲದಿರುವ ಕಾಂಗ್ರೆಸ್ ಪಕ್ಷ ಕೇವಲ ಅಸಹಿಷ್ಣುತೆ, ದ್ವೇಷವನ್ನೇ ನೀತಿಯನ್ನಾಗಿಸಿದೆ. ಸುಳ್ಳು ಮತ್ತು ದ್ವೇಷವನ್ನೇ ಅಜೆಂಡಾವನ್ನಾಗಿಟ್ಟುಕೊಂಡು ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ನಗರದ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್ಸಿಗರು ಕೈಲಾಗದವ ಮೈ ಪರಚಿಕೊಂಡ ಎಂಬಂತೆ ದ್ವೇಷ ಮತ್ತು ಆಸಹಿಷ್ಣುತೆಯ ಮಾತುಗಳನ್ನು ಆಡುತ್ತಿದ್ದಾರೆ. ಇವರ ನಾಯಕ ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋಗಿ ಭಾರತವನ್ನು ಅಪಮಾನ ಮಾಡುವ ಕೆಲಸ ಮಾಡುತ್ತಾರೆ ಎಂದರು