ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಏ.12ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ನಗರದ ಮಂಗಳವಾರ ಆಯೋಜಿಸಿದ್ದ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ದಿನದಂದು ಸುಮಾರು 25 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು