ರಾಮನಗರ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ಇಂದು ಮಾ.28ರಂದು ಬೆಳಗ್ಗೆ 11 ಗಂಟೆಗೆ ನಾಮ ಪತ್ರ ಸಲ್ಲಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಗೃಹ ಸಚಿವ ಪರಮೇಶ್ವರ್ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ರವರು ಉಮೇದುವಾರಿಕೆ ಸಲ್ಲಿಕೆಗೆ ಅಂತಿಮ ದಿನವಾದ ಏಪ್ರಿಲ್ 4ರಂದು ನಾಮಪತ್ರ ಸಲ್ಲಿಸುವರು.