Home » ಏ.2ರಂದು ಹೆಗ್ಡೆ ನಾಮಪತ್ರ
 

ಏ.2ರಂದು ಹೆಗ್ಡೆ ನಾಮಪತ್ರ

by Kundapur Xpress
Spread the love

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಎ.2ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಗುರುವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಅಂದು ಬೆಳಗ್ಗೆ 9.00 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ಚುನಾವಣಾ ಉಸ್ತುವಾರಿಯಾಗಿರುವ ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಭಾಗವಹಿಸಲಿದ್ದಾರೆ. ನಂತರ 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ

   

Related Articles

error: Content is protected !!