Home » ಸಿದ್ದರಾಮಯ್ಯ ಗರ್ವಭಂಗಕ್ಕೆ ದೇವೇಗೌಡ ಕರೆ
 

ಸಿದ್ದರಾಮಯ್ಯ ಗರ್ವಭಂಗಕ್ಕೆ ದೇವೇಗೌಡ ಕರೆ

by Kundapur Xpress
Spread the love

ಬೆಂಗಳೂರು : ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗರ್ವಭಂಗ ಮಾಡಬೇಕು ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಕರೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ನಡೆದ ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯಂಥ ಜಗ ಮೆಚ್ಚಿದ ನಾಯಕರ ಬಗ್ಗೆ ಸಿದ್ದರಾಮಯ್ಯ ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಗೆಲ್ಲಿಸುವ ಸಾಮರ್ಥ ಶಾಸಕ ಜಿ.ಟಿ.ದೇವೇಗೌಡ ಅವರಿಗಿದೆ. ಎರಡು ಕ್ಷೇತ್ರಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ಸಿದ್ದರಾಮಯ್ಯ ಗರ್ವಭಂಗ ಮಾಡಬೇಕು ಎಂದು ಸೂಚಿಸಿದರು.

ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು. ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ದೇಶದ ಪ್ರಧಾನಿ ಬಹಳ ದುರ್ಬಲ ಎಂದು ಭಾವಿಸಿದ್ದಾರೆ. ಪ್ರಧಾನಿ ವಿರುದ್ಧವೇ ನ್ಯಾಯಾಲಯಕ್ಕೆ ಹೋಗಿದ್ದಾರೆ. ಎಂಥ ಜನ ಇವರು ಎಂದು ಕಿಡಿಕಾರಿದರು.

   

Related Articles

error: Content is protected !!