ಕೋಟೇಶ್ವರ : ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದಾಗಿನಿಂದ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಮಹಾಶಕ್ತಿ, ಶಕ್ತಿ ಕೇಂದ್ರ, ನಗರಸಭೆ, ಪುರಸಭೆಗಳ ವಾರ್ಡ್ ಗಳು, ಗ್ರಾಮೀಣ ಭಾಗ ಹೀಗೆ ಬಹುತೇಕ ಕಡೆಗಳಿಗೆ ಭೇಟಿ ಕೊಟ್ಟಿದ್ದೇನೆ. ಈ ವೇಳೆ ಪಕ್ಷದ ನಾಯಕರು, ಪದಾಧಿಕಾರಿಗಳು, ಕಾಠ್ಯಕರ್ತರ ಉತ್ಸಾಹ ಕಂಡಾಗ ಈ ಬಾರಿ ದಾಖಲೆಯ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ಮೂಡಿದೆ. ಅದೇ ರೀತಿ ಕುಂದಾಪುರ ಮಂಡಲದ ನಾಯಕರು, ಪದಾಧಿಕಾರಿಗಳು ಕಾಠ್ಯಕರ್ತರ ಪರಿಶ್ರಮ ಹಾಗೂ ಹಾಲಾಡಿ ಶ್ರೀನಿವಾಸ ಶೆಟ್ಟರ ಸಹಕಾರದಿಂದ ಭಾರೀ ಮತಗಳ ಮುನ್ನಡೆ ಸಿಗುವ ವಿಶ್ವಾಸವಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಶುಕ್ರವಾರ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಕುಂದಾಪುರ ಮಂಡಲದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಸಭೆ, ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಇದು ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ. ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಚುನಾವಣೆ ಇದಾಗಿದೆ. ಭಾರತವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಬಿಜೆಪಿಯನ್ನು ಗೆಲ್ಲಿಸಬೇಕಿದೆ ಎಂದರು