ಬೆಂಗಳೂರು ನಗರದ ಖಾಸಗಿ ಹೊಟೇಲ್ನಲ್ಲಿ ಆಯೋ ಜಿಸಿದ್ದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ಮಂಗಳವಾರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ ಅಮಿತ್ ಶಾ ಅವರನ್ನು ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತ. ಕೋರಿದರು. ಈ ವೇಳೆ ಕುಮಾರಸ್ವಾಮಿ ಅವರನ್ನು ನೋಡುತ್ತಿದ್ದಂತೆ ಅವರ ಆರೋಗ್ಯ ವಿಚಾರಿಸಿದ ಅಮಿತ್ ಶಾ, ‘ಹೌ ಆರ್ ಯು ಕುಮಾರಸ್ವಾಮಿ’ ಎಂದು ಹಸ್ತಲಾಘವ ಮಾಡಿ ಕೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಆರೋಗ್ಯ ಚೆನ್ನಾಗಿದೆ, ಫೈನ್ ಎಂದರು.