Home » ರಾಜ್ಯಕ್ಕೆ ಪ್ರಧಾನಿ – ಸುನಿಲ್‌ ಕುಮಾರ್
 

ರಾಜ್ಯಕ್ಕೆ ಪ್ರಧಾನಿ – ಸುನಿಲ್‌ ಕುಮಾರ್

by Kundapur Xpress
Spread the love

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಏ.14ರಂದು ಮೈಸೂರು ಮತ್ತು ಮಂಗಳೂರಿನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಸುನೀಲ್ ಕುಮಾರ್ ಬುಧವಾರ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಏ.14ರಂದು ಸಂಜೆ 4 ಗಂಟೆಗೆ ಮೈಸೂರು ಮಹಾರಾಜ ಮೈದಾನದಲ್ಲಿ ಮೈಸೂರು-ಕೊಡಗು, ಚಾಮರಾಜನಗರ ಮಂಡ್ಯ ಲೋಕಸಭಾ ಕ್ಷೇತ್ರಗಳ ಬಿಜೆಪಿ – ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನೊಳಗೊಂಡ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಈ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಿಯವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದರು. ಅದೇ ದಿನ ಸಂಜೆ 6 ಗಂಟೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರು ನಗರದ ನಾರಾಯಣಗುರು ವೃತ್ತದಿಂದ ನವಭಾರತ್ ವೃತ್ತದವರೆಗೆ ಸುಮಾರು 1.5 ಕಿ.ಮೀ. ದೂರ ರೋಡ್ ಶೋ ಜರುಗಲಿದೆ. ಈ ಕಾರ್ಯಕ್ರಮ ದಲ್ಲಿ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರ ‘ವ್ಯಾಪ್ತಿಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು

   

Related Articles

error: Content is protected !!