ಉಡುಪಿ :ವಿಧಾನಸಭಾ ಕ್ಷೇತ್ರದ ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಸುಧಾಕರ್ ಶೆಟ್ಟಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಭಾರತ ವಿಶ್ವ ಗುರುವಾಗಬೇಕಾದರೆ ಸನ್ಮಾನ ಶ್ರೀ ನರೇಂದ್ರ ಮೋದಿ ಅವರು ಮಗದೊಮ್ಮೆ ಪ್ರಧಾನಿಯಾಗಬೇಕು. ಇದಕ್ಕಾಗಿ ನಾವು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಹೆಚ್ಚಿನ ಮತಗಳಿಂದ ಅಂತರದಿಂದ ಗೆಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ, ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರಾಜೀವ ಕುಲಾಲ್ ಹಾಗೂ ಗ್ರಾಮಾಂತರ ಮಂಡಲ ಬಿಜೆಪಿ ಪದಾಧಿಕಾರಿಗಳು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.