ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಗತ್ಯ ಸೇವಾ ಪ್ರವರ್ಗದಲ್ಲಿ ಬರುವ ಗೈರು ಹಾಜರಿ ಮತದಾರರು ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅನುಕೂಲವಾಗುವಂತೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಸಂಕೀರ್ಣದ ಎ ಬ್ಲಾಕ್, ಚುನಾವಣಾಧಿಕಾರಿಯವರ ಕಚೇರಿಯ ಕಂಟ್ರೋಲ್ ರೂಂ ನಲ್ಲಿ ಏ.19, 20 ಹಾಗೂ 21 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಅಂಚೆ ಮತದಾನ ಕೇಂದ್ರವನ್ನು ತೆರೆಯಲಾಗಿರುತ್ತದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ