ಕುಂದಾಪುರ : ಸುಮಾರು 4 ಶತಮಾನಗಳ ಇತಿಹಾಸ ಹೊಂದಿರುವ ಕುಂದಾಪುರ ಸರಕಾರಿ ಆಸ್ಪತ್ರೆ ಸಮೀಪದಲ್ಲಿರುವ ಪ್ರಾಚೀನ ಶ್ರೀ ನಂದಿಕೇಶ್ವರ ದೇವಸ್ಥಾನದ ನೂತನ ಶಿಲಾಮಯ ದೇಗುಲದ ಲೋಕಾರ್ಪಣೆಗೆ ಸಿದ್ಧತೆಗಳು ಪೂರ್ಣಗೊಂಡಿದೆ
ನಾಳೆ ಎಪ್ರಿಲ್ 14 ರಿಂದ 16ರ ತನಕ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಎ.15 ರಂದು ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದ್ದು ಎ.16 ರಂದು ಬ್ರಹ್ಮಕಲಶಾಭಿಷೇಕ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿರುವುದು.
ವಿದ್ವಾನ್ ಕೋಟ ಕೆ. ಚಂದ್ರಶೇಖರ ಸೋಮಯಾಜಿಯವರು ಮತ್ತು ತಂಡದವರಿಂದ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಸರ್ವ ಭಕ್ತಾಭಿಮಾನಿಗಳು ಭಾಗವಹಿಸಿ, ದೇವರ ಕೃಪೆಗೆ ಪಾತ್ರರಾಗಬೇಕೆಂದು ವ್ಯವಸ್ಥಾಪನಾ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ವಿನಂತಿಸಿದ್ದಾರೆ.ದೇವಾಲಯದ ಹಿಂಭಾಗದ ವಿಶಾಲವಾದ ಸ್ಥಳದಲ್ಲಿ ಅನ್ನಸಂತರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಉತ್ತಮ ವ್ಯವಸ್ಥೆ ರೂಪಿಸಲಾಗಿದೆ.
ಭಜನಾ ಒಕ್ಕೂಟದಿಂದ ಭಜನಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಎ.15 ರಂದು ಸಂಜೆ 7:00ಕ್ಕೆ ಶ್ರೀ ಕೋದಂಡರಾಮ ಕೃಪಾ ಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಮೇಳದವರಿಂದ “ಶುಕ್ರನಂದನೆ” ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ