ಬಿ.ಜೆ.ಪಿ. ಯ ಅಪಪ್ರಚಾರದಿಂದಾಗಿ ಕಾಂಗ್ರೆಸ್ಗೆ ಸೋಲು – ಗೋಪಾಲ ಪೂಜಾರಿ
ಕುಂದಾಪುರ: ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದರೂ ಸಹ ಬಿ.ಜೆ.ಪಿ. ಯವರ ನಿರಂತರ ಅಪಪ್ರಚಾರದಿಂದಾಗಿ ನನ್ನ ಕ್ಷೇತ್ರದಲ್ಲಿ ನನಗೆ ಹಾಗೂ ಕಾಂಗ್ರೆಸ್ಗೆ ಸೋಲುಂಟಾಯಿತೆಂದು ಮಾಜಿ ಶಾಸಕ ಗೋಪಾಲ ಪೂಜಾರಿ ಹೇಳಿದರು. ಅವರು ಬುಧವಾರ ಕುಂದಾಪುರದ ಶಾಸ್ತ್ರೀಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆಯ ಸಮಾರಂಭದಲ್ಲಿ ಮಾತನಾಡಿದರು. ಗೋಪಾಲ ಪೂಜಾರಿ ಮಾತನಾಡಿ ಕಾಂಗ್ರೆಸ್ಗೆ ಮತ ಹಾಕಿದರೆ ನಿಮ್ಮ ಮನೆಯಲ್ಲಿ ತುಳಸಿಕಟ್ಟೆ ಇರುವುದಿಲ್ಲ. ಪರೇಶ ಮೇಸ್ತನ ಮನೆಯವರನ್ನು ಕರೆಸಿ ಕೊಲೆ ಎಂದು ಕಣ್ಣೀರು ಹಾಕಿಸಿದರು. ಈಗ ಇದೇ ಸಿಬಿಐ ಇದು ಕೊಲೆಯಲ್ಲ ಎಂದು ವರದಿ ನೀಡಿದೆ.
ವೇದಿಕೆಯಲ್ಲಿ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರಾದ ಬಿ.ಕೆ. ಹರಿಪ್ರಸಾದ್, ಎ.ಐ.ಸಿ.ಸಿ ಕಾರ್ಯದರ್ಶಿ ರೋಝಿ ಎಂ. ಜಾನ್, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಪೂರ್ ಮಾತನಾಡಿದರು. ಬ್ಲಾಕ್ ಅಧ್ಯಕ್ಷರಾದ ಕುಂದಾಪುರದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಬೈಂದೂರಿನ ಮದನ್ ಕುಮಾರ್, ಕೋಟದ ಶಂಕರ್ ಕುಂದರ್, ಮುಖಂಡರಾದ ಎಸ್. ರಾಜು ಪೂಜಾರಿ, ದಿನೇಶ್ ಪುತ್ರನ್, ಅಲೆವೂರು ಹರೀಶ್ ಕಿಣಿ, ಬಿ. ಹೆರಿಯಣ್ಣ, ದೇವಕಿ ಸಣ್ಣಯ್ಯ, ದಿನೇಶ್ ಹೆಗ್ಡೆ ಮೊಳಹಳ್ಳಿ, ಸುರೇಂದ್ರ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ಶ್ಯಾಮಲಾ ಭಂಡಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಲ್ಯಾಡಿ ಶಿವರಾಮ ಶೆಟ್ಟಿ, ದೇವಾನಂದ ಶೆಟ್ಟಿ, ವಿಕಾಸ್ ಹೆಗ್ಡೆ, ಸದಾನಂದ ಶೆಟ್ಟಿ ಕೆದೂರು, ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ, ರೋಷನ್ ಕುಮಾರ್ ಶೆಟ್ಟಿ, ಶೇಖರ ಪೂಜಾರಿ ಬೈಂದೂರು, ಗಣೇಶ್, ಸೌರಭ್ ಬಲ್ಲಾಳ್, ಇಚ್ಚಿತಾರ್ಥ್ ಶೆಟ್ಟಿ, ಮುನಾಫ್ ಕೋಡಿ, ಸುಜನ್ ಶೆಟ್ಟಿ ಉಪಸ್ಥಿತರಿದ್ದರು. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಸ್ತಾವಿಸಿದರು. ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ಸ್ವಾಗತಿಸಿ, ಕುಂದಾಪುರ ಬ್ಲಾಕ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ಕಾರ್ಯಕ್ರಮ ನಿರೂಪಿಸಿದರು