Home » ಸರಕಾರದ ಕುಮ್ಮಕ್ಕಿನಿಂದ ಹಲ್ಲೆ
 

ಸರಕಾರದ ಕುಮ್ಮಕ್ಕಿನಿಂದ ಹಲ್ಲೆ

ಆರ್‌ ಅಶೋಕ್

by Kundapur Xpress
Spread the love

ಬೆಂಗಳೂರು : ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದ ಹಿಂದೂ ಯುವಕರನ್ನು ತಡೆದು ಅನ್ಯ ಕೋಮಿನ ಯುವಕರು ಹಲ್ಲೆ ಮಾಡಿದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ನಾಯಕರು, ಈ ರೀತಿಯ ಘಟನೆಗೆ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣದ ನೀತಿಯೇ ಕಾರಣವಾಗಿದೆ. ಹಲ್ಲೆ ಮಾಡಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪ್ರತಿಪಕ್ಷದ ನಾಯಕ ಆ‌ರ್.ಅಶೋಕ್  ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು. ಸಿದ್ದರಾಮಯ್ಯ ಅವರು ಇಸ್ಲಾಮಿಕ್ ಮೂಲಭೂತವಾದಿಗಳಿಗೆ ಕರ್ನಾಟಕವನ್ನು ಧಾರೆ ಎರೆದಿದ್ದಾರೆ. ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಹಿಂದೂಗಳು ಭಯದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

   

Related Articles

error: Content is protected !!