ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯ ಕೊಲೆ ಹಾಗೂ ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆಯಂತಹ ಘಟನೆಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಾಜ್ಯ ಸರ್ಕಾರ ವಿರುದ್ಧ ಹರಿಹಾಯ್ದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಂದಾದರೂ ಎಚ್ಚೆತ್ತುಕೊಳ್ಳಬೇಕು. ಹುಬ್ಬಳ್ಳಿ ಹಾಗೂ ಗದಗ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸ್ ಅಧಿಕಾರಿಗಳ ವರ್ಗಾವಣೆ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಇದರಿಂದ ಅಧಿಕಾರಿಗಳು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವುದು ಅಸಾಧ್ಯ. ವರ್ಗಾವಣೆಗೆ ಕೊಟ್ಟ ಹಣವನ್ನು ವಾಪಸ್ ಗಳಿಸಲು ಪೊಲೀಸರು ವ್ಯವಸ್ಥೆಯ ಜತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಇದರಿಂದ ಸಮಾಜಘಾತುಕ ಶಕ್ತಿಗಳ ತಡೆಯಲು ಆಗಲ್ಲ ಎಂದು ಹೇಳಿದರು