Home » ಮದ್ಯ ಮಾರಾಟ ನಿಷೇಧಿಸಿ ಆದೇಶ
 

ಮದ್ಯ ಮಾರಾಟ ನಿಷೇಧಿಸಿ ಆದೇಶ

by Kundapur Xpress
Spread the love

ಉಡುಪಿ :  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಏ.24ರ ಸಂಜೆ 5.00 ಗಂಟೆಯಿಂದ 26ರ ಮಧ್ಯರಾತ್ರಿ 12.00 ರವರೆಗೆ ಹಾಗೂ ಜೂನ್ 4ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಜೂ.3ರ ಮಧ್ಯರಾತ್ರಿ 12ಗಂಟೆಯಿಂದ ಏ.4ರ ಮಧ್ಯರಾತ್ರಿ 12ಯವರೆಗೆ ಮದ್ಯ ಮಾರಾಟ ನಿಷೇಧಿಸಿ ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ಮೇಲೆ ತಿಳಿಸಿದ ಅವಧಿಯಲ್ಲಿ ಮೂರು ಜಿಲ್ಲೆಯಲ್ಲಿಯೂ ಎಲ್ಲಾ ವಿಧದ ಮದ್ಯಗಳ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೊಟೇಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಸಿದೆ

   

Related Articles

error: Content is protected !!