ನವದೆಹಲಿ: ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್ ಹೊರಟಿದ್ದು ಮಹಿಳೆಯರ ಮಂಗಳಸೂತ್ರವನ್ನೂ ಬಿಡಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಸಂಬಂಧ ಕೇಂದ್ರ ಚುನಾವಣಾ’ ಆಯೋಗ ನೋಟಿಸ್ ಜಾರಿಗೊಳಿಸಿದೆ. ಎ.29ರೊಳಗೆ ಉತ್ತರಿಸುವಂತೆ ಸೂಚಿಸಿದೆ. ಪ್ರಧಾನಿಯೊಬ್ಬರ ಹೇಳಿಕೆ ವಿರುದ್ಧ ಆಯೋಗ ನೋಟಿಸ್ ಜಾರಿಗೊಳಿಸಿದ್ದು ದೇಶದ ಇತಿಹಾಸದಲ್ಲಿ ಇದೇ ಮೊದಲು.
ಮತ್ತೊಂದೆಡೆ, ದೇಶದ ಇತಿಹಾಸದ ಮೇಲೆ ಮೋದಿ ದಾಳಿ ನಡೆಸುತ್ತಿದ್ದಾರೆ ಎಂಬ ಕಾಂಗ್ರೆಸ್ಸಿಗ ರಾಹುಲ್ ಗಾಂಧಿ ಹೇಳಿಕೆ ಹಾಗೂ ದಲಿತ ಎಂಬ ಕಾರಣಕ್ಕೆ ರಾಮಮಂದಿರ ಉದ್ಘಾಟನೆಗೆ ಆಹ್ವಾನಿಸಲಿಲ್ಲ ಎಂಬ ಹೇಳಿಕೆ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ನೋಟಿಸ್ ಜಾರಿಗೊಳಿಸಲಾಗಿದೆ.