ಉಡುಪಿ : ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೆಡ್ಗಳನ್ನು ಬಳಸಬೇಕು ಹಾಗೂ ಆಗಿಂದಾಗ್ಗೆ ತಣ್ಣೀರು ಸ್ನಾನ ಮಾಡಬೇಕು ಮನೆಯಿಂದ ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ, ಟೋಪಿ ಅಥವಾ ಕ್ಯಾಪ್, ಹೆಡ್ಗವರ್, ಹ್ಯಾಂಡ್ ಟವೆಲ್, ಹ್ಯಾಂಡ್ವಾನ್, ಎಲೆಕ್ಟೋಲೈಟ್, ಗ್ಲೋಕೋಸ್, ಓ.ಆರ್. ಎಸ್ ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಒಯ್ಯುವಂತೆ ನಾಗರಿಕರನ್ನು ಪ್ರೋತ್ಸಾಹಿಸಬೇಕು. ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಎಡೆರ್ನಾ (ಊತ) ಮತ್ತು ಮೂರ್ಛೆ ಹೋಗುವುದು, ಆಯಾಸ, ದೌರ್ಬಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ, ಬೆವರುವುದು ದೇಹದ ಉಷ್ಣತೆ ಹೆಚ್ಚಾಗುವುದು, ಉಸಿರಾಟದಲ್ಲಿ ವ್ಯತ್ಯಯ ಹಾಗೂ ಪ್ರಜ್ಞೆ ತಪ್ಪುವುದು ಸಂಭವಿಸಲಿದ್ದು, ಈ ಸಂದರ್ಭದಲ್ಲಿ ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸಬೇಕು ಅಥವಾ ತಂಪಾದ ಒದ್ದೆ ಬಟ್ಟೆಯನ್ನು ಆ ವ್ಯಕ್ತಿಯ ಮೇಲೆ ಹಾಕಬೇಕು. ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕಬೇಕು. ವ್ಯಕ್ತಿಯ ಬಟ್ಟೆಯನ್ನು ಸಡಿಲಗೊಳಿಸಿ. ತಂಪಾದ ಗಾಳಿಯ ವ್ಯವಸ್ಥೆಯನ್ನು ಮಾಡಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.