ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಇತ್ಯಾದಿ ಪ್ರದೇಶಗಳಲ್ಲಿ ಸಿಎನ್ಜಿ ಗ್ಯಾಸ್ನ ಕೊರತೆಯಿಂದಾಗಿ ಬಂಕ್ಗಳ ಮುಂದೆ ವಾಹನಗಳು ಸರತಿ ಸಾಲಿನಲ್ಲಿ ನಿಂತು ಚಾಲಕರು ಮತ್ತು ಮಾಲಕರು ಸಂಕಷ್ಟಕ್ಕೆ ಈಡಾದ ಪರಿಸ್ಥಿತಿಯನ್ನು ಗಮನಿಸಿದ ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಸಂಪನ್ಮೂಲ ಸಚಿವ ಹರ್ ದೀಪ್ ಸಿಂಗ್ ಪುರಿ ಅವರಿಗೆ ಮನವಿ ಮಾಡಿ ಕೂಡಲೇ ಮಧ್ಯೆ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪತ್ರ ಬರೆದು ವಿನಂತಿದ್ದಾರೆ