Home » ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ
 

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ

ರೇವಣ್ಣ

by Kundapur Xpress
Spread the love

ಬೆಂಗಳೂರು :  ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಲಾಗಿದೆ ಎಂದು ಮಹಿಳೆ ಅಪಹರಣ ಪ್ರಕರ ಸಂಬಂಧ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಸ್.ಡಿ.ರೇವಣ್ಣ ಹೇಳಿದ್ದಾರೆ. ಎಸ್‌ಐಟಿ ಭಾನುವಾರ ಸಂಜೆ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ಯುವ ಮುನ್ನ ವೈದ್ಯಕೀಯ ತಪಾಸಣೆಗೆ ಬೌರಿಂಗ್ ಆಸ್ಪತ್ರೆಗೆ ಕರೆತಂದಾಗ ಸುದ್ದಿಗಾರರೊಂದಿಗೆ ಮಾತ ನಾಡಿದ ರೇವಣ್ಣ, ನನ್ನ ವಿರುದ್ಧ ರಾಜಕೀಯ ಪದ್ಯಂತ ನಡೆಸಿದ್ದಾರೆ. ಯಾವುದೇ ಪುರಾವೆ ಇಲ್ಲದೇ ದುರುದ್ದೇಶದಿಂದ ಬಂಧಿಸಿದ್ದಾರೆ ಎಂದರು. ನನ್ನ ವಿರುದ್ದ ಷಡ್ಯಂತ್ರ ಮಾಡಿ  ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನನ್ನ 40 ವರ್ಷಗಳ ರಾಜಕೀಯದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲ, ಎ.28ರಂದು ನನ್ನ ವಿರುದ್ಧ ನೀಡಿರುವ ದೊರಿಗೆ ಯಾವುದೇ ಪುರಾವೆ ಸಿಕ್ಕಿಲ್ಲ, ಮೇ 2ರಂದು ದಾಖಲಿಸಿರುವ ದೂರಿಗೂ ಯಾವುದೇ ಪುರಾವೆ ಸಿಕ್ಕಿಲ್ಲ ಎಂದರು

   

Related Articles

error: Content is protected !!