ಹೆಮ್ಮಾಡಿ; ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿ ಮಾತನಾಡಿ 2024-25ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿದರು ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಈಗಾಗಲೇ ನಡೆದ ಎರಡು ಕಿರು ಪರೀಕ್ಷೆಗಳ ಉತ್ತರ ಪತ್ರಿಕೆಯನ್ನು ಪೋಷಕರಿಗೆ ವಿತರಿಸಿ ವಿದ್ಯಾರ್ಥಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ವಿದ್ಯಾರ್ಥಿ ಪೋಷಕರು ಮಾತನಾಡಿ ಗುಣಮಟ್ಟದ ಶಿಕ್ಷಣದ ಕುರಿತಾಗಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಹರ್ಷ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿ,ವಿದ್ಯಾರ್ಥಿ ಪೋಷಕರು,ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಉಪನ್ಯಾಸಕ ಉದಯ ನಾಯ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು