ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಕಾಂಗ್ರೆಸ್ ಮುಖಂಡರಾದ ಕೆ ವಸಂತ್ ಬಂಗೇರರವರು ಇಂದು ಮಧ್ಯಾಹ್ನ 3.30 ಗಂಟೆಯ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು ಅವರಿಗೆ 79 ವರ್ಷ ವಯಸ್ಸಾಗಿತ್ತು
ಜನವರಿ 15, 1946 ರಂದು ಜನಿಸಿದ ಅವರು ಐದು ಬಾರಿ ಬೆಳ್ತಂಗಡಿಯ ಶಾಸಕರಾಗಿ ಸೇವೆ ಸಲ್ಲಿಸಿದ್ದು ಒಂದು ಬಾರಿ ವಿಧಾನಸಭೆಯ ಮುಖ್ಯ ಸಚೇತಕರಾಗಿ ಕೆಲಸ ಮಾಡಿದ್ದರು
ಅವರ ಆರೋಗ್ಯ ಇತ್ತೀಚಿಗೆ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ಸಂಜೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ ಅವರು ಪತ್ನಿ ಹಾಗೂ ಇಬ್ಬರು ಪುತ್ತಿಯರು ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ
ನಾಳೆ ಮೇ 9ರಂದು ಮುಂಜಾನೆ ಅವರ ಪ್ರಾರ್ಥೀವ ಶರೀರ ಬೆಳ್ತಂಗಡಿಗೆ ಬರಲಿದ್ದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ