ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಿಯೋಜಿಸಿರುವ ಎಸ್ಐಟಿ ಪಾರದರ್ಶಕವಾಗಿ ತನಿಖೆ ನಡೆಸದ ಕಾರಣ ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂವುಟದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಬೇಕು ಎಂದು ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದೆ.ಈಸಂಬಂಧ ಗುರುವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ ‘ಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಮುಖಂಡರ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು. ಅಶ್ಲೀಲ ವಿಡಿಯೋಗಳಿರುವ ಸುಮಾರು 25 ಸಾವಿರಕ್ಕೂ ಹೆಚ್ಚು ಪೆನ್ ಡ್ರೈವ್ಗಳ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರ ನೇರ ಪಾತ್ರವಿದೆ ಎಂದು ದೂರಿದೆ