ಬೈಂದೂರು : ಸಮೃದ್ಧ ಬೈಂದೂರು ಟ್ರಸ್ಟ್ ಹಾಗೂ ಅರುಣಾಚಲಂ ಟ್ರಸ್ಟ್ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಕಾಲು ಸಂಕಗಳ ಕಾಮಗಾರಿ ಪ್ರಗತಿ ಪರಿಶೀಲನೆಯನ್ನು ಮೇ 12ರಂದು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಮಾಡಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ತೊಂಬಟ್ಟು ಕಬ್ಬಿನಾಲೆ ಸಮೀಪದ ಕಾಲುಸಂಕದ ಕಾಮಗಾರಿ ಪರಿಶೀಲನೆ ನಡೆಸಿ, ನಂತರ ಬೆಳಗ್ಗೆ 10 ಗಂಟೆಗೆ ಯಡಮೊಗೆ, ಕುಂಮ್ಟಿಬೇರು ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ಕಾಲು ಸಂಕಗಳ ಕಾಮಗಾರಿಯನ್ನು ವೀಕ್ಷಿಸಲಿದ್ದಾರೆ. ತದನಂತರ ಬೆಳಗ್ಗೆ 11 ಗಂಟೆಗೆ ವಂಡ್ಸೆ ಅಬ್ಬಿ ಕಾಲು ಸಂಕ ಪರಿಶೀಲನೆ ನಡೆಸಲಿದ್ದಾರೆ.
ಅರುಣಾಚಲಂ ಟ್ರಸ್ಟ್‌ನ ಸಹಭಾಗಿತ್ವದಲ್ಲಿ ವಿನೂತನ ಪರಿಕಲ್ಪನೆಗಳೊಂದಿಗೆ ಕಾಲು ಸಂಕಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕ್ಷೇತ್ರದ ಜನತೆ ಕಾಲು ಸಂಕ ಇಲ್ಲದೇ ಸಮಸ್ಯೆ ಆಗಬಾರದು ಎಂಬ ಸದುದ್ದೇಶದಿಂದ ಅರುಣಾಚಲಂ ಟ್ರಸ್ಟ್‌ನೊಂದಿಗೆ ಒಪ್ಪಂದ ಮಾಡಿಕೊಂಡು ತುರ್ತು ಅಗತ್ಯವಿರುವ ಕೆಲವೆಡೆ ಕಾಲು ಸಂಕ ನಿರ್ಮಾಣ ಮಾಡುತ್ತಿದ್ದೇವೆ. ನವೀನ ಆವಿಷ್ಕಾರದೊಂದಿಗೆ ಕಾಲು ಸಂಕ ನಿರ್ಮಾಣವಾಗುತ್ತಿದೆ. ಅದರ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಖುದ್ದು ಸ್ಥಳಭೇಟಿಯ ಮೂಲಕ ನಡೆಸಲಾಗುವುದು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಮಾಹಿತಿ ನೀಡಿದರು.