ಬೆಂಗಳೂರು : ವಿದೇಶದಲ್ಲಿ ತಲೆಮರೆಸಿಕೊಂಡಿರುವ 2 ಅತ್ಯಾಚಾರ ಪ್ರಕರಣಗಳ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಇದೀಗ ಪ್ರಜ್ವಲ್ ವಿರುದ್ಧ 3ನೇ ಅತ್ಯಾಚಾರ ಆರೋಪದ ಪ್ರಕರಣ ದಾಖಲಾಗಿದೆ. ಈ ಹಿಂದೆ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯು ನ್ಯಾಯಾಧೀಶರ ಎದುರು ಸಿಆರ್ಪಿಸಿ 164. ಅಡಿ ಹೇಳಿಕೆ ದಾಖಲಿಸುವಾಗ ಸಂಸದ ಪ್ರಜ್ವಲ್ ರೇವಣ್ಣ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಕಲಂ 376 (ಅತ್ಯಾಚಾರ) ಸೇರ್ಪಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ