Home » ಕರಾವಳಿಯನ್ನು ಬಿಜೆಪಿ ನಾಯಕರು ಸಂಪೂರ್ಣ ಕಡೆಗಣಿಸಿದ್ದಾರೆ
 

ಕರಾವಳಿಯನ್ನು ಬಿಜೆಪಿ ನಾಯಕರು ಸಂಪೂರ್ಣ ಕಡೆಗಣಿಸಿದ್ದಾರೆ

ಮಾಜಿ ಶಾಸಕ ರಘುಪತಿ ಭಟ್

by Kundapur Xpress
Spread the love

ಮಂಗಳೂರು :ಈ ಬಾರಿಯ ನೈಋತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಕರಾವಳಿಯನ್ನು ಬಿಜೆಪಿ ನಾಯಕರು ಸಂಪೂರ್ಣ ಕಡೆಗಣಿಸಿದ್ದಾರೆ. ಹೀಗಾಗಿ ನಾನು ಓರ್ವ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದೇನೆಎಂದುಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ, ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಪ್ರಾದೇಶಿಕತೆ ಹಾಗೂ ನೈತಿಕತೆಯ ಪ್ರಶ್ನೆ ಇರುವುದರಿಂದ ಪಕ್ಷದ ವಿರುದ್ಧ ನಾನು ಹೋಗುತ್ತಿದ್ದೇನೆ ಎಂದು ಅನಿಸುವುದಿಲ್ಲ, ನನಗೆ ಟಿಕೆಟ್ ನೀಡುವುದಾಗಿ ನಂಬಿಸಿ ಬಳಿಕ ನಾಯಕರು ಇತ್ತೀಚೆಗಷ್ಟೆ ಕಾಂಗ್ರೆಸ್‌ನಿಂದ ಬಂದ, ರಾಷ್ಟ್ರೀಯತೆ ವಿರುದ್ಧ ಪ್ರತಿಭಟಿಸಿದ್ದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದಾರೆ. ನನ್ನ ಸ್ಪರ್ಧೆ ಅವರ ವಿರುದ್ಧವೂ ಅಲ್ಲ. ಶಿವಮೊಗ್ಗದಲ್ಲೇ ಪಕ್ಷಕ್ಕಾಗಿ ಮಡಿದ ಅನೇಕ ಮಂದಿ ಇದ್ದಾರೆ, ಅವರಲ್ಲೊಬ್ಬರಿಗೆ ಟಿಕೆಟ್ ನೀಡಿದರೂ ನಾನು ಸ್ಪರ್ಧಿಸುತ್ತಿರಲಿಲ್ಲ. ಇದು ಪಕ್ಷಾತೀತ ಚುನಾವಣೆಯಾದ್ದರಿಂದ ಜನತೆ ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ನಾನು ಗೆದ್ದು ಮತ್ತೆ ಬಿಜೆಪಿ ಬೆಂಬಲಿಸುತ್ತೇನೆ. ನನ್ನನ್ನು ಪಕ್ಷ ಉಚ್ಚಾಟಿಸಿದರೆ ಆ ದಿನ ಬಹಳ ದುಃ ಖಪಡಬಹುದು. ಆದರೂ ಕಾರ್ಯಕರ್ತನಾಗಿಯೇ ಇರುತ್ತೇನೆ. ಯಾವುದೇ ಕಾರಣಕ್ಕೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ. ದೃಢ ನಿಶ್ಚಯ ಮಾಡಿಯೇ ನಾನು ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಅಸೆಂಬ್ಲಿ ಚುನಾವಣೆಯಲ್ಲಿ ವಿನಾ ಕಾರಣ ನನಗೆ ಟಿಕೆಟ್ ನಿರಾಕರಿಸಲಾಯಿತು. ಪರಿಷತ್ ಚುನಾವಣೆಗೆ ಭರವಸೆ ನೀಡಿ ಬಳಿಕ ಬೇರೊಬ್ಬರಿಗೆ ಟಿಕೆಟ್ ನೀಡಿದರು. ಕರಾವಳಿಯಲ್ಲಿ ಯಾರನ್ನು ನಿಲ್ಲಿಸಿದರೂ ಪಕ್ಷ ಗೆಲ್ಲುತ್ತದೆ ಎಂಬ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರ ನಾಯಕರ ಭ್ರಮೆ ಈ ಚುನಾವಣೆಯಿಂದ ತೊಲಗಬೇಕು ಎಂದು ರಘುಪತಿ ಹೇಳಿದರು

   

Related Articles

error: Content is protected !!