ಬೆಂಗಳೂರು : ಯುವತಿ ಅಂಜಲಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೆಗೀಡಾದ ಇಬ್ಬರು ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ನೇಹಾ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಅನೇಕ ವಿಚಾರಗಳನ್ನು ತಮ್ಮ ಮುಂದೆ ಹೇಳಲು ಆಗುವುದಿಲ್ಲ. ಇದರಿಂದ ತನಿಖೆಗೆ ಅಡ್ಡಿಯಾಗುತ್ತದೆ. ಕೃತ್ಯಕ್ಕೆ ಕಾರಣ ಏನೆಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದರು. ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ఎంబ ಉದ್ದೇಶದಿಂದ ಈ ಎರಡು ಕೊಲೆ ಪ್ರಕರಣಗಳನ್ನು ಸಿಐ ಡಿಗೆ ವಹಿಸಲಾಗಿದೆ.