ಬೆಂಗಳೂರು : ಹಾಸನ ಜಿಲ್ಲೆಯ ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್ .ಡಿ.ರೇವಣ್ಣ ಅವರಿಗೆ 42 ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ, ಜಾಮೀನು ರದ್ದುಕೋರಿ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ. ಇದರಿಂದಾಗಿ ರೇವಣ್ಣ ಮತ್ತೊಂದು ಸುತ್ತಿನ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ
ಈ ಹಿಂದೆ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರು ನ್ಯಾಯಾಂಗ ಬಂಧನದಲ್ಲಿರುವಾಗಲೇ ಜಾಮೀನು ಪಡೆದಿದ್ದರು. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಾದ-ಪ್ರತಿವಾದ ಆಲಿಸಿದ ಬಳಿಕ ತೀರ್ಪನ್ನು ಕಾಯ್ದಿರಿಸಲಾಗಿತ್ತು.