ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ನ ಸಂಯುಕ್ತ ಆಶ್ರಯದಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಕಾರ್ಯಾಗಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಷೇರು ಮಾರುಕಟ್ಟೆಯ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಹೂಡಿಕೆ ಮಾಡಿದರೆ ಮಾತ್ರ ಹಣದ ಸದ್ಬಳಕೆ ಆಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ನ ಸಂಯೋಜಕರಾದ ಸುಧೀರ ಕುಮಾರ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಸಿದ ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಸ್ವಾಗತಿಸಿದರು. ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ವಂದಿಸಿದರು. ವಿದ್ಯಾರ್ಥಿನಿ ವೈಷ್ಣವಿ ಪ್ರಾರ್ಥಿಸಿ, ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು.