ಕುಂದಾಪುರ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಪೂರ್ವಭಾವಿಯಾಗಿ ಭಾರತೀಯ ಜನತಾ ಪಾರ್ಟಿ ಕುಂದಾಪುರದ ಕಚೇರಿಯಲ್ಲಿ ಆಯೋಜಿಸಿದ್ದ, ಕುಂದಾಪುರ ವಿಧಾನಸಭಾ ಕ್ಷೇತ್ರದ ಮಂಡಲದ ಪದಾಧಿಕಾರಿಗಳು, ಜನಪ್ರತಿನಿಧಿಗಳ ಸಭೆಯು ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು,
ಕುಂದಾಪುರದ ಬಿಜೆಪಿ ಕಚೇರಿಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಭಾಗವಹಿಸಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ, 1988 ರಲ್ಲಿ ಪ್ರಾರಂಭವಾದ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಇಲ್ಲಿಯ ವರೆಗೆ ನಡೆದ ಆರು ಬಾರಿ ಚುನಾವಣೆಯಲ್ಲಿ ಆರು ಬಾರಿಯೂ ಕೊಡ ಬಿಜೆಪಿ ಗೆದ್ದಿದೆ,ಡಾ!! ಧನಂಜಯ ಸರ್ಜಿ ಅವರು ಒಂದು ರೈತಾಪಿ ಕುಟುಂಬ ವರ್ಗದಲ್ಲಿ ಬೆಳೆದು,,ತನ್ನ ಇಳೆಯ ವಯಸ್ಸಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿ, ಸಂಘದ ಎಲ್ಲಾ ಜವಾಬ್ದಾರಿಗಳನ್ನು ಅದ್ಭುತವಾಗಿ ನಿರ್ವಹಿಸಿ ಆ ವಯಸ್ಸಿನಲ್ಲಿಯೇ ಸಂಘಟನೆಯ ಶಿಸ್ತನ್ನು ಪಡೆದುಕೊಂಡಿರುವ ಇವರು ಪದವೀಧಾರರ ಹಿತ ಕಾಯಲು ಅವರು ಸದಾ ಬದ್ಧರಾಗಿದ್ದಾರೆ ಎಂದು. ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡರ ಗೆಲುವಿಗೆ ಸಂಕಲ್ಪ ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಕಿದಿಯೂರು,, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ,, ಸುಧೀರ್.ಕೆ.ಎಸ್,,ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ,, ಮಂಗಳೂರು ಸಹಪ್ರಭಾರಿ ರಾಜೇಶ್ ಕಾವೇರಿ, ಚುನಾವಣಾ ಪ್ರಭಾರಿ ಸುರೇಶ ಶೆಟ್ಟಿ ಕಾಡುರುಬೈಕಾಡಿ *ಸುಪ್ರಸಾದ್ ಶೆಟ್ಟಿ,, ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರ್, ಮತ್ತು ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.