ಬೆಂಗಳೂರು: ಪೆನ್ಡೈವ್ ಪ್ರಕರಣಕ್ಕೆ ಸಂಬರಿಧಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗುವಂತೆ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ತಾಕೀತು ಮಾಡಿದ್ದಾರೆ. ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ಅವರು, ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಬಾ ಎಂದು ಪ್ರಜ್ವಲ್ಗೆ ಹೇಳಿದ್ದಾರೆ. ಇದು ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಎಂದೂ ತಿಳಿಸಿದ್ದಾರೆ.