ನವದೆಹಲಿ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ‘ಪರಾರಿ’ ಆಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯವು ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವ ಕುರಿತು ಶೋಕಾಸ್ ನೋಟಿಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಪ್ರಕರಣದಲ್ಲಿ ಮೊದಲ ಬಾರಿ ಕೇಂದ್ರ ಕಠಿಣ ಕ್ರಮ ಅನುಸರಿಸಿದ್ದು, ಸಂಸದನಿಗೆ ಇದುಸಂಕಷ್ಟ ತಂದೊಡಬಹುದು ಎಂದು ವಿಶ್ಲೇಷಿಸಲಾಗಿದೆ. ಪ್ರಜ್ವಲ್ ಅವರಿಗೆ ಇ-ಮೇಲ್ ಮೂಲಕ ನೋಟಿಸ್ ನೀಡಲಾಗಿದ್ದು, ‘ರಾಜ್ಯ ಸರ್ಕಾರದ ಕೋರಿಕೆಯಂತೆ ಏಕೆ ನಿಮ್ಮ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡಲು ಅಗತ್ಯ ಕ್ರಮ ಕೈಗೊಳ್ಳಬಾರದು ?” ಎಂದು ಪ್ರಶ್ನಿಸಲಾಗಿದೆ
‘ಇದು ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಯ ಮೊದಲ ಹೆಜ್ಜೆಯಾಗಿದೆ. ಒಂದು ವೇಳೆ ಅವರ ಪಾಸ್ಪೋರ್ಟ್ ರದ್ದಾದರೆ ಅವರು ವಿದೇಶದಲ್ಲಿ ನೆಲೆಸುವುದು ಕಾನೂನು ಬಾಹಿರವಾಗಲಿದೆ. ಆಗ ಅವರು ಯಾವ ದೇಶದಲ್ಲಿದ್ದಾರೋ ಆ ದೇಶದ ಸರ್ಕಾರ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದೆ’ ಎಂದು ಮೂಲಗಳು ಹೇಳಿವೆ