ಬೆಂಗಳೂರು : ವಿಧಾನಪರಿಷತ್ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ನೈಋತ್ಯ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿ ರುವ ರಘುಪತಿ ಭಟ್ ಅವರನ್ನು ಪಕ್ಷದಿಂದ ಆರು ವರ್ಷ ಕಾಲ ಉಚ್ಚಾಟಿಸಲಾಗಿದೆ. ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಚುನಾವಣೆಗೆ ಅಧಿಕೃತ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಡಾ.ಧನಂಜಯ ಸರ್ಜಿ ಅವರನ್ನು ಕಣಕ್ಕಿಳಿಸಿದೆ. ಆದರೂ ರಘುಪತಿ, ಆಟ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದು ಪಕ್ಷಕ್ಕೆ ಮುಜುಗರ ತಂದಿದೆ. ಅಲ್ಲದೇ, ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಶಿಸ್ತು ಸಮಿತಿಯು ತಕ್ಷಣದಿಂದ ಜಾರಿಗೆ ಬರುವಂತೆ ರಘುಪತಿ ಭಟ್ಗೆ ನೀಡಿರುವ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪಕ್ಷವು ಇತ್ತೀಚೆಗೆ ರಘುಪತಿ ಭಟ್ಗೆ ನೋಟಿಸ್ ನೀಡಿದ್ದು, ಶಿಸ್ತು ಸಮಿತಿ ಮುಂದೆ ಬಂಡಾಯ ಸ್ಪರ್ಧೆಗೆ ಸಂಬಂಧಿಸಿದಂತೆ 2 ದಿನದೊಳಗೆ ಸ್ಪಷ್ಟಿಕರಣ ನೀಡುವಂತೆ ಸೂಚಿಸಿತ್ತು. ಆದರೂ ಸಮರ್ಪಕವಾದ ಉತ್ತರ ನೀಡದ ಕಾರಣಕ್ಕಾಗಿ ಉಚ್ಚಾಟನೆ ಮಾಡಲಾಗಿದೆ.