ಹೊಸದಿಲ್ಲಿ: ಪೂರ್ವ ದಿಲ್ಲಿಯ ವಿವೇಕ್ ವಿಹಾರ್ನಲ್ಲಿರುವ ಮಕ್ಕಳ ಖಾಸಗಿ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಏಳು ನವಜಾತ ಶಿಶುಗಳು ಮೃತಪಟ್ಟಿವೆ.
ಬೇಬಿ ಕೇರ್ ನ್ಯೂ ಬಾರ್ನ್ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ 11:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಶೀಘ್ರದಲ್ಲೇ ಇತರ ಎರಡು ಕಟ್ಟಡಗಳಿಗೆ ಹರಡಿತು ಎಂದು ದಿಲ್ಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕನನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯು ಡಾ.ನವೀನ್ ಖಿಚಿ ಅವರ ಒಡೆತನದಲ್ಲಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಖಿಚಿ ಜೈಪುರಕ್ಕೆ ಪರಾರಿಯಾಗಿದ್ದ ಆಸ್ಪತ್ರೆ ಮಾಲೀಕರ ವಿರುದ್ಧ ವಿವೇಕ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 336 ಮತ್ತು 304ರ ಅನ್ವಯದಲ್ಲಿ ಪ್ರಕರಣ ದಾಖಲಿಸಲಾಗಿದೆ