ಉಡುಪಿ : ಬಿಜೆಪಿಯಿಂದ ತನ್ನನ್ನು ಉಚ್ಚಾಟಿಸಿರುವುದು ಮಾಧ್ಯಮದ ಮೂಲಕ ತಿಳಿದು ಬೇಸರವಾಯಿತು. ಶಿಸ್ತು ಸಮಿತಿಯ ನೋಟಿಸ್ ಇದುವರೆಗೆ ತನಗೆ ತಲುಪಿಲ್ಲ ಇದರಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ಹಗಲಿರುಳು ದುಡಿಯವ ಕಾರ್ಯಕರ್ತನಿಗೆ ನಿರಂತರ ನೋವಾಗುತ್ತಿದೆ ಎಂದು ಬಿಜೆಪಿಯಿಂದ ಉಚ್ಚಾಟಿತ ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾನುವಾರ ಉಡುಪಿ ಯಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ಪಕ್ಷದ ಎಲ್ಲ ಹುದ್ದೆಯಿಂದ ವಜಾ ಮಾಡುವುದಾಗಿ ಹೇಳಿದ್ದಾರೆ. ನನ್ನದು ಕಾರ್ಯಕರ್ತ ಹುದ್ದೆ ಪಕ್ಷದಲ್ಲಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ. ಬಿಜೆಪಿ ನನ್ನನ್ನು ರಘುಪತಿ ಯಾವ ಹುದ್ದೆಯಿಂದ ವಜಾ ಮಾಡಿದೆ ಸ್ಪಷ್ಟಪಡಿಸಬೇಕು. ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ತಪ್ಪಿದಾಗ, ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡುತ್ತೇವೆ ಎಂದಿದ್ದರು. ಆದರೆ ಪಕ್ಷ ನನ್ನನ್ನು ರಾಜ್ಯ ಕಾರ್ಯಕಾರಿ ಸದಸ್ಯನನ್ನೂ ಮಾಡಿಲ್ಲ, ಈ ವಜಾಕ್ಕೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ. ನಾನು ಮೋದಿಗೆ ಬೈದಿಲ್ಲ, ರಾಜ್ಯದ ನಾಯಕರಿಗೆ ಬೈದಿಲ್ಲ, ಆದರೆ ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ ಎಂದರು