ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಆಕಾಂಕ್ಷಿಗಳ ಒತ್ತಡ ತೀವ್ರವಾಗಿದ್ದು, ರಾಜ್ಯ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಈ ಬಗ್ಗೆ ರಾಜ್ಯ ನಾಯಕರು ಬಿಜೆಪಿ ಹೈಕಮಾಂಡ್ಗೆ ಮಾಹಿತಿ ನೀಡಿದ್ದು ನೀವು ಶಿಫಾರಸು ಪಟ್ಟಿಯನ್ನು ಕಳುಹಿಸಿದ್ದೀರಿ. ಮುಂದಿನದನ್ನು ನಾವು ನೋಡಿಕೊಳ್ಳುತ್ತೇವೆ ಎಂಬ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿಗೆ ಮೂರು ಸ್ಥಾನಗಳು ಲಭ್ಯವಾಗುತ್ತವೆ. ಕಳೆದ ವಾರ ನಡೆದ ಬಿಜೆಪಿ ರಾಜ್ಯ ಘಟಕದ ಹಿರಿಯ ನಾಯಕರನ್ನು ಒಳಗೊಂಡ ಕೋರ್ಕಮಿಟಿ ಸಭೆಯಲ್ಲಿ ಸುಮಾರು 44ಕ್ಕೂ ಹೆಚ್ಚು ಆಕಾಂಕ್ಷಿಗಳ ಬಗ್ಗೆ ಚರ್ಚೆ ನಡೆದಿತ್ತು.