ಉಡುಪಿ : ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಇಂದು ಗುರುವಾರ ಬೆಳಿಗ್ಗೆ ಘಂಟೆ 11.30ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರು, ಪಕ್ಷದ ರಾಜ್ಯ ನಾಯಕರು, ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.