ಕುಂದಾಪುರ : ಕುಂದಾಪುರ ನಗರದಲ್ಲಿರುವ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಾಗುತ್ತಿದ್ದಂತೆ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ರಾಬರ್ಟ್ ರೆಬೆಲ್ಲೋ ನಾಪತ್ತೆಯಾಗಿದ್ದು ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ
ಎನ್ ಆರ್ ಎಚ್ ಎಂ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯೆದ್ಯೆಯೊಬ್ಬರಿಗೆ ಕರ್ತವ್ಯದ ಆರಂಭದ ದಿನದಿಂದಲೂ ಆಡಳಿತ ವೈದ್ಯಾಧಿಕಾರಿ ರಾಬರ್ಟ್ ರೆಬೆಲ್ಲೋರವರಿಂದ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು
ಡಾ| ರಾಬರ್ಟ್ ರೆಬೆಲ್ಲೋ ಮೇಲೆ ಸಾರ್ವಜನಿಕರಿಂದ ಹಾಗೂ ಸಹ ಸಿಬಂದಿ, ವೈದ್ಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಡೆದ ತನಿಖೆ ಆಧಾರದಲ್ಲಿ ಹಾಗೂ ಲೈಂಗಿಕ ದೌರ್ಜನ್ಯ ಕೇಸು ದಾಖಲಾದ ಹಿನ್ನೆಲೆಯಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ಡಿಸಿ ಡಾ| ವಿದ್ಯಾ ಕುಮಾರಿ ಆದೇಶ ಹೊರಡಿಸಿ ಕುಂದಾಪುರ ಆಸ್ಪತ್ರೆಗೆ ಡಾ| ಲತಾ ಅವರನ್ನು ವೈದ್ಯಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ