ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ| ಸಿ.ಎನ್.ಮಂಜುನಾಥ್ ಅವರು ಭರ್ಜರಿ ಗೆಲುವು ಸಾಧಿಸುವ ಮೂಲಕ ಪ್ರತಿಸ್ಪರ್ಧಿ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರಿಗೆ ಆಘಾತ ನೀಡಿದ್ದಾರೆ
ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಸ್ಥಾನದಿಂದ ನಿವೃತ್ತರಾದ ಮೇಲೆ ರಾಜಕಾರಣ ಪ್ರವೇಶಿಸಿದ ಡಾ। ಮಂಜುನಾಥ್ ಚೊಚ್ಚಲ ಚುನಾವಣೆಯಲ್ಲೇ ಪ್ರತಿಸ್ಪರ್ಧಿ ಸುರೇಶ್ರನ್ನು 2,69,647 ಮತಗಳಿಂದ ಮಣಿಸಿ ಸಂಸತ್ ಪ್ರವೇಶಿಸಿದ್ದಾರೆ. ಡಾ|ಮಂಜುನಾಥ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಳಿಯ ಹಾಗೂ ಡಿ.ಕೆ. ಸುರೇಶ್ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರರಾಗಿರುವ ಕಾರಣ ಬೆಂಗಳೂರು ಗ್ರಾಮಾಂತರ ಹೈವೋಲೇಜ್ ಕ್ಷೇತ್ರವಾಗಿ ಪರಿಗಣಿಸಲ್ಪಟ್ಟಿತ್ತು. ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳು ಹಾಗೂ ಕಾಂಗ್ರೆಸ್ ಪಾಲಿಗೂ ಇದು ಪ್ರತಿಷ್ಠೆಯ ಕಣವಾಗಿತ್ತು.