Home » ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ
 

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ

-ಸಿಎಂ ಸಿದ್ದರಾಮಯ್ಯ

by Kundapur Xpress
Spread the love

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಜನರ ಮನ್ನಣೆ ದೊರಕಿಲ್ಲ ಎಂಬ ಕಾರಣ ನೀಡಿ ಕಾಂಗ್ರೆಸ್‌ನ ಕೆಲ ನಾಯಕರು ಅನೌಪಚಾರಿಕ ವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಈ ವೇಳೆ ಗ್ಯಾರಂಟಿ ಯೋಜನೆ ಬಗ್ಗೆ ಪುನರ್ ಪರಿಶೀಲನೆ ನಡೆಯಬೇಕು ಎಂಬ ಅಭಿಪ್ರಾಯವನ್ನು ಬಹುತೇಕ ಶಾಸಕರು ಹೊಂದಿದ್ದಾರೆ ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ ಎನ್ನಲಾ ಗಿದೆ. ಆದರೆ, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪದೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲಾಗದು ಎಂದು ಈ ನಾಯಕರಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ.

   

Related Articles

error: Content is protected !!