ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸುವಂತೆ ಸಚಿವ ಬಿ.ನಾಗೇಂದ್ರ’ಗೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂ ಲಗಳು ತಿಳಿಸಿವೆ. ಈ ಮೂಲಗಳ ಪ್ರಕಾರ, ನಾಗೇಂದ್ರ ಅವರು ಗುರುವಾರ ರಾಜೀನಾಮೆ ನೀಡುವ ಸಾಧ್ಯತೆಯಿದೆ. ರಾಜೀನಾಮೆ ನೀಡಿದರೆ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾದಂತಾಗಲಿದೆ.
ಬುಧವಾರ ತಡರಾತ್ರಿ ಹಿರಿಯ ಸಚಿವರೊಂ ದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಈ ಸಭೆಗೆ ನಾಗೇಂದ್ರ ಅವರನ್ನು ಕರೆಸಿಕೊಂಡರು. ಈ ವೇಳೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದರು ಎಂದು ಮೂಲಗಳು ಹೇಳಿವೆ.