ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ 293 ಸ್ಥಾನ ಗೆದ್ದು ಬಹುಮತ ಪಡೆದುಕೊಂಡಿರುವ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ, ಶುಕ್ರವಾರ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದೆ.
ಜೊತೆಗೆ ಈ ಮೊದಲು ವರದಿಯಾದಂತೆ ಜೂ.8ರ ಶನಿವಾರದ ಬದಲು ಜೂ. 9ರ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ನೇಪಾಳ, ಬಾಂಗ್ಲಾದೇಶ, ಮಾರಿಷಸ್, ಭೂತಾನ್, ಶ್ರೀಲಂಕಾ, ಮಾಲೀನ್ಸ್ ದೇಶದ ನಾಯಕರಿಗೆ ಸರ್ಕಾರ ಆಹ್ವಾನ ನೀಡಿದ್ದು ಅವರೆಲ್ಲಾ ಭಾಗಿಯಾಗುವ ನಿರೀಕ್ಷೆ ಇದೆ.