ಕುಂದಾಪುರ : ಕುಂದಾಪುರದ ಪಂಚ ಗಂಗಾವಳಿ ನದಿಯಲ್ಲಿ ಚಿಪ್ಪು ಸಾಗಾಟ ಮಾಡುತ್ತಿದ್ದ ಬಾಲಾಜಿ ಹೆಸರಿನ ಹಾಯಿ ದೋಣಿ ಧರ್ಮಸ್ಥಳದ ವಸ್ತು ಸಂಗ್ರಹಾಲಯ ಸೇರಿಕೊಳ್ಳುತ್ತಿದೆ. ಕುಂದಾಪುರಮಧ್ಯ ಖಾರ್ವಿಕೇರಿಯ ನಿವಾಸಿ ದಿ. ಶಂಕರ್ ಖಾರ್ವಿಯವರ ಪುತ್ರ ವೆಂಕಟೇಶ್ ಅವರ ಮಾಲಿಕತ್ವದ ಈ ಹಾಯಿ ದೋಣಿ ಸೇವೆಯಿಂದ ಮುಕ್ತವಾಗಿದ್ದು ಅದರ ಸದ್ಬಳಕೆಯ ಉದ್ದೇಶದಿಂದ ಧರ್ಮಸ್ಥಳದ ವಸ್ತು ಸಂಗ್ರಹಾಲಯಕ್ಕೆ ನೀಡಲು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಒಪ್ಪಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ಹಾಯಿ ದೋಣಿ ಶ್ರೀ ಕ್ಷೇತ್ರಕ್ಕೆ ಕೊಂಕಣ ಖಾರ್ವಿ ಸಮಾಜದ ಕಾಣಿಕೆಯಾಗಿ ಜೂ.9ರಂದು ಧರ್ಮಸ್ಥಳದ ವಸ್ತು ಸಂಗ್ರಹಾಲಯ ಮಂಜೂಷಾಕ್ಕೆ ಸೇರಿಕೊಳ್ಳುತ್ತಿದೆ.