ಕುಂದಾಪುರ : ರಾಜ್ಯ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಅರ್ಚಕರಾದ ಡಾ| ಕೆ.ಎನ್ ನರಸಿಂಹ ಅಡಿಗ ಹಾಗೂ ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.
ದೇಗುಲದ ಉಪ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕೊಡವೂರು, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕಿಶನ್ ಹೆಗ್ಡೆ ಕೊಳ್ಳೆಬೈಲ್, ಕಾರ್ಕಳ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ಮುನಿಯಾಲು, ಬಾಬುಹೆಗ್ಡೆ ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ದೇಗುಲದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ರಮೇಶ ಗಾಣಿಗ, ಅಭಿಲಾಷ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು