ನವದೆಹಲಿ : ಕೇಂದ್ರದಲ್ಲಿ ರಚನೆಯಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ನೀಡುವಂತೆ ಯಾವುದೇ ಒತ್ತಡ ಹಾಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ನೂತನ ಸಂಸದ 25.2. ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಸಚಿವ ಸ್ಥಾನದ ಕುರಿತುನನಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದರೂ ಸಹಯೋಗಿ ಪಕ್ಷಗಳಿಗೆ, ನಮಗೂ ಖಾತೆ ನೀಡುತ್ತಾರೆ ಎಂಬ ಮಾಹಿತಿ ಇದೆ. ನಮ್ಮಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯ ಎಂಬುದು ಹೈಕಮಾಂಡ್‌ಗೆ ಗೊತ್ತಿದೆ. ರಾಜ್ಯ ಜನರಿಗೂ ವಿಶ್ವಾಸ ಇದೆ. ನಾಡಿನ ಜನತೆ, ದೇಶಕ್ಕೆ ಒಳಿತಾಗುವ ಖಾತೆ ಸಿಕ್ಕರೆ ಉತ್ತಮವಾಗಿ ಕೆಲಸ ಮಾಡಬಹುದಾಗಿದೆ. ಈ ಕುರಿತ ಅಂತಿಮ ತೀರ್ಮಾನ ಬಿಜೆಪಿ ವರಿಷ್ಠರಿಗೆ ಬಿಟ್ಟಿದ್ದು ಎಂದರು.