ಕುಂದಾಪುರ : ಕುಂದಾಪುರ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಮಹಿಳಾ ವೈದ್ಯಾಧಿಕಾರಿಯೋರ್ವರಿಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಕಿರುಕುಳ ನೀಡಿ ತಲೆ ಮರೆಸಿಕೊಂಡಿದ್ದ ಕುಂದಾಪುರದ ತಾಲೂಕು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ.ರಾಬರ್ಟ್ ರೆಬೆಲ್ಲೊ ಅವರನ್ನು ಕುಂದಾಪುರ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.
ಮುಂಬೈನ ಹೊರವಲಯದ ರೆಸಾರ್ಟ್ ಒಂದರಲ್ಲಿ ಇದ್ದ ಡಾ.ರಾಬರ್ಟ್ ಅವರನ್ನು ಕುಂದಾಪುರ ಸರ್ಕಲ್ ಇನ್ಸ್ಪೆಕ್ಟರ್ ನಂದಕುಮಾರ್ ಮತ್ತು ಪೊಲೀಸ್ ತಂಡದವರು ವಶಕ್ಕೆ ಪಡೆದು ಕುಂದಾಪುರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯಅವರಿಗೆ ಜಾಮೀನು ಮಂಜೂರು ಮಾಡಿದೆ ಆರೋಪಿಯ ಜಾಮೀನು ಕೋರಿ ನ್ಯಾಯವಾದಿ ದಿನೇಶ್ ಶೆಟ್ಟಿ ವಾದ ಮಂಡಿಸಿದ್ದರು
ಪ್ರಕರಣ ದಾಖಲಾದ ನಂತರ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಡಾ. ರಾಬರ್ಟ್ ರವರನ್ನು ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು