ಉಡುಪಿ : ಪ್ರಧಾನಿ ನರೇಂದ್ರ ಮೋದಿ ಸಂಪುಟದ ನೂತನ ಕೇಂದ್ರ ಸಚಿವರುಗಳಿಗೆ ಹಾಗೂ ಕರ್ನಾಟಕ ರಾಜ್ಯದಿಂದ ಬಿಜೆಪಿ ಹಾಗೂ ಎನ್.ಡಿ.ಎ ಸಂಸದರಾಗಿ ಆಯ್ಕೆಯಾಗಿ ಅವಕಾಶ ಪಡೆದ ಐದು ಮಂದಿ ಕೇಂದ್ರ ಸಚಿವರುಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಭಿನಂದನೆ ಸಲ್ಲಿಸಿದ್ದಾರೆ.
ಕೇಂದ್ರ ಹಣಕಾಸು, ಕಾರ್ಪೊರೇಟ್ ವ್ಯವಹಾರ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್, ಬೃಹತ್ ಕೈಗಾರಿಕೆ ಮತ್ತು ಸ್ಟೀಲ್ ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ನಾಗರಿಕ ವ್ಯವಹಾರ, ಆಹಾರ ಹಾಗೂ ಸಾರ್ವಜನಿಕ ಹಂಚಿಕೆ, ಹೊಸ ಹಾಗೂ ನವೀಕರಣ ಇಂಧನ ಖಾತೆ ಸಚಿವ ಪ್ರಹ್ಲಾದ ಜೋಶಿ, ಜಲ ಶಕ್ತಿ ಮತ್ತು ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ, ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ಕಾರ್ಮಿಕ, ಉದ್ಯೋಗ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಇವರ ನೇತೃತ್ವದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಂತಾಗಲಿ ಎಂದು ಅವರು ಹಾರೈಸಿದ್ದಾರೆ.