ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರನ್ನು ಮತ್ತೆ ಬಂಧಿಸಿ ಜೈಲಿಗೆ ಕಳುಹಿಸಲು ಸರ್ಕಾರ ಸಿದ್ಧತೆ ನಡೆಸಿದೆಯೇ ? ಇದೀಗ ಆಗಿರುವ ದಿಢೀರ್ ಬೆಳವಣಿಗೆಗೆ ಳನ್ನು ನೋಡಿದರೆ ಯಡಿಯೂರಪ್ಪ ಅವರ ಬಂಧನ ನಿಶ್ಚಿತ ಎನ್ನುವ ಹಂತ ತಲುಪಿದೆ. ಮೂರು ತಿಂಗಳ ಹಿಂದೆ ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಚುನಾವಣೆಯ ಫಲಿತಾಂಶದ ನಂತರ ದಿಢೀರ್ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರನ್ನು ಬಂಧಿಸುವ ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಈ ಪ್ರಕರಣ ಸಂಬಂಧ ಯಡಿಯೂರಪ ಅವರಿಗೆ ಸಿಐಡಿ ಮಂಗಳವಾರ ದಿಢೀರ್ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪ ಈ ಅವರನ್ನು ಬಂಧಿಸುವಂತೆ ಆದೇಶ ಕೋರಿ ಹೈಕೋರ್ಟ್ನಲ್ಲಿ ಸಂತ್ರಸ್ತೆಯ ಕುಟುಂಬ ಮನವಿ ಮಾಡಿದೆ