Home » ಬಿಎಸ್‌ವೈ ವಿರುದ್ಧ ರಾಜಕೀಯ ಷಡ್ಯಂತ್ರ
 

ಬಿಎಸ್‌ವೈ ವಿರುದ್ಧ ರಾಜಕೀಯ ಷಡ್ಯಂತ್ರ

ಸಂಸದ ಬಿ.ವೈ. ರಾಘವೇಂದ್ರ

by Kundapur Xpress
Spread the love

ಶಿವಮೊಗ್ಗ : ಬಿ ರಿಪೋರ್ಟ್ ಹಾಕುವಂತಹ ಪ್ರಕರಣ ಆಗಿದ್ದರೂ ತಂದೆ ಯಡಿಯೂರಪ್ಪನವರ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ತಂದಿರುವುದರ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಗುರುವಾರ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆ ಮಾನಸಿಕ ಅಸ್ವಸ್ಥೆ ಎಂದು ಹೇಳಿಲಾಗಿತ್ತು. ಗೃಹ ಸಚಿವರಾದ ಪರಮೇಶ್ವರ್ ಕೂಡ ಇದನ್ನೇ ಹೇಳಿದ್ದರು. ಐಎಎಸ್, ಐಪಿಎಸ್ ಅಧಿಕಾರಿಗಳ ಮೇಲೆಯೂ ಇದೇ ರೀತಿಯ ಆರೋಪ ಮಾಡಲಾಗಿತ್ತು. ಬಳಿಕ ಅದು ಸುಳ್ಳೆಂದು ಹೇಳಲಾಗಿತ್ತು ಎಂದರು. ಬಿಜೆಪಿ ಮೇಲೆ ಆರೋಪ ಮಾಡಿದ್ದ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮೇಲೆ ಕೇಸು ಹಾಕಿದ್ದರಿಂದಾಗಿ ಅವರು ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಆ ಸೇಡು ತೀರಿಸಿಕೊಳ್ಳಲು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಮರೆಮಾಚಲು ಸಂಚು ರೂಪಿಸಿದಂತಿದೆ. ಏನೇ ಮಾಡಿದರೂ ನ್ಯಾಯಾಲಯದ ಮೇಲೆ ವಿಶ್ವಾಸವಿದೆ. ತಂದೆಯವರು ದೋಷ ಮುಕ್ತರಾಗುತ್ತಾರೆಂಬ ವಿಶ್ವಾಸವಿದೆ ಎಂದರು.

   

Related Articles

error: Content is protected !!