ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನ್ನ ಹೆಸರು ಹೇಳದೆ ಪೊಲೀಸರಿಗೆ ಶರಣಾಗತಿಯಾಗುವ ನಾಲ್ವರು ಸಹಚರರಿಗೆ ನೀಡುವಂತೆ ಖುದ್ದು ನಟ ದರ್ಶನ್ ತಮ್ಮ ಮನೆಯಲ್ಲೇ 30 ಲಕ್ಷ ರು.ಗಳನ್ನು ನೀಡಿದ್ದರು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ
ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೆಡ್‌ನಲ್ಲಿ ತಾವು ಹಲ್ಲೆ ನಡೆಸಿ ಹೊರಬಂದ ಬಳಿಕ ರೇಣುಕಾಸ್ವಾಮಿ ಸಾವಿನ ಸಂಗತಿ ತಿಳಿದು ಆತಂಕಗೊಂಡ ದರ್ಶನ್, ತಮ್ಮ ಮನೆಗೆ ಆಪ್ತರಾದ ವಿನಯ್, ಪ್ರದೋಷ್ ಹಾಗೂ ದೀಪಕ್‌ನನ್ನು ಕರೆಸಿಕೊಂಡು ಮಾತುಕತೆ ನಡೆಸಿದ್ದರು. ಆಗ ತನ್ನ ಹೆಸರು ಪ್ರಕರಣದಲ್ಲಿ ಬಾರದಂತೆ ನೋಡಿಕೊಳ್ಳುವಂತೆ ಹೇಳಿ ಪ್ರದೋಷ್‌ಗೆ 30 ಲಕ್ಷ ರು. ಹಣವನ್ನು ದರ್ಶನ್ ಕೊಟ್ಟಿದ್ದರು. ಈ ಹಣವನ್ನು ಪ್ರದೋಷ್ ಮನೆಯಲ್ಲಿ ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ