ಬೆಂಗಳೂರು : ನಟ ದರ್ಶನ್ ಮತ್ತು ಅವರ ಗ್ಯಾಂಗ್ನಿಂದ ಹತ್ಯೆಯಾದ ವೇಳೆ ಚಿತ್ರದುರ್ಗದ ರೇಣುಕಾ ಸ್ವಾಮಿ ಧರಿಸಿದ್ದ ಬಟ್ಟೆಗಳನ್ನು ಘಟನೆ ನಡೆದ ಎಂಟು ದಿನಗಳ ನಂತರ ಕೊನೆಗೂ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಂತ್ರಸ್ತನನ್ನು ಹೊಡೆದು ಸಾಯಿಸಿದ ಪಟ್ಟಣಗೆರೆಯ ಶೆಡ್ ನಲ್ಲೇ ಬಟ್ಟೆಯನ್ನು ಹಂತಕರು ಬಚ್ಚಿಟ್ಟಿದ್ದರು.
ಆದರೆ, ಮೃತದೇಹದ ಜೊತೆಗೇ ರಾಜಾ ಕಾಲುವೆಗೆ ಎಸೆದಿದ್ದಾರೆ ಎನ್ನಲಾದ ರೇಣುಕಾ ಸ್ವಾಮಿಯ ಮೊಬೈಲ್ ಮಾತ್ರ ಇನ್ನೂ ನಾಪತ್ತೆಯಾಗಿದೆ. ಪ್ರಕರಣದಲ್ಲಿ ಆತನ ಮೊಬೈಲ್ ಕೂಡ ಪ್ರಮುಖ ಸಾಕ್ಷ್ಯವಾಗಿದ್ದು, ಅದರ ಶೋಧಕ್ಕಾಗಿ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯ ಜೊತೆಗೆ ರಾಜಾಕಾಲುವೆಯನ್ನು ಜಾಲಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳಾದ ನಾಗರಾಜ್, ದೀಪಕ್, ನಂದೀಶ್ನನ್ನು ಭಾನುವಾರ ಮತ್ತೆ ಬೆಂಗಳೂರಿನ ಪಟ್ಟಣಗೆರೆಯ ಶೆಡ್ ಗೆ ಕರೆತಂದಿದ್ದ ಪೊಲೀಸರು, ಆರೋಪಿಗಳು ಬಚ್ಚಿಟ್ಟಿದ್ದ ರೇಣುಕಾಸ್ವಾಮಿಯ ರಕ್ತಸಿಕ್ತ ಬಟ್ಟೆಗಳನ್ನು ವಶಕ್ಕೆ ಪಡೆದಿದ್ದಾರೆ